ಬೀದರ್, ಜ 12 (DaijiworldNews/PY): ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಂಡಿದೆ.
ಈ ನಡುವೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊರೊನಾ ನಿಯಮ ಉಲ್ಲಂಘಿಸಿದ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ದ ದೂರು ದಾಖಲಾಗಿದೆ.
ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ಔರಾದ್ ಠಾಣೆಗೆ ದೂರು ನೀಡಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ವೇಳೆಯಲ್ಲಿ ಸಚಿವ ಪ್ರಭು ಚೌವ್ಹಾಣ್ ಅವರು ಎಕ್ಕಂಬಾ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭ ಅವರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.