ರಾಮನಗರ, ಜ 12 (DaijiworldNews/PY): "ಹೈಕೋರ್ಟ್, ಮೇಕೆದಾಟು ಪಾದಯಾತ್ರೆ ಬಗ್ಗೆ ನೀಡುವ ಸೂಚನೆಯನ್ನು ಪಾಲಿಸಲು ನಾವು ಸಿದ್ದ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹೈಕೋರ್ಟ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೋ ಎಂದು ನಮಗೆ ತಿಳಿದಿಲ್ಲ. ನಾವು ಕಾನೂನು ರೀತಿಯಲ್ಲಿಯೂ ಹೋರಾಟವನ್ನು ಮುಂದುವರಿಸುತ್ತೇವೆ. ಸದ್ಯ, ಮೇಕೆದಾಟು ಪಾದಯಾತ್ರೆ ಮುಂದುವರಿಯಲಿದೆ" ಎಂದು ಹೇಳಿದರು.
ಈ ವೇಳೆ ಮಾತನಾಡಿದ ಮಾಜಿ ಕಾನೂನು ಸಚಿವ ಟಿ ಬಿ ಜಯಚಂದ್ರ, "ನಮಗೆ ನ್ಯಾಯಾಲಯದ ಕುರಿತು ಗೌರವ ಇದೆ. ನ್ಯಾಯಾಲಯದ ಆದೇಶಕ್ಕೆ ನಾವು ತಲೆಬಾಗುತ್ತೇವೆ" ಎಂದು ತಿಳಿಸಿದರು.
ಹೈಕೋರ್ಟ್ನಲ್ಲಿ ಪಿಐಎಲ್ ವಿಚಾರಣೆ ಹಿನ್ನೆಲೆ ಕೈ ನಾಯಕರು ಮಧ್ಯಾಹ್ನ ಕೆ.ಪಿ ದೊಡ್ಡ ಗ್ರಾಮದಲ್ಲಿ ಸಭೆ ನಡೆಸಿದರು.