ಬೆಂಗಳೂರು, ಜ 12 (DaijiworldNews/HR): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಇಂದು 21,390 ಮಂದಿಗೆ ಸೋಂಕು ದೃಢಪಟ್ಟಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 21,390 ಮಂದಿಗೆ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 21,390 ಜನರಿಗೆ ಕೊರೊನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ.10.96ಕ್ಕೆ ಏರಿಕೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಬೆಂಗಳೂರಿನಲ್ಲಿ 73 ಸಾವಿರ ಸೇರಿದಂತೆ 93,009ಕ್ಕೆ ಏರಿಕೆಯಾಗಿವೆ ಎಂದು ತಿಳಿಸಿದ್ದಾರೆ.
ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 1,541 ಜನರು ಗುಣಮುಖರಾಗಿದ್ದಾರೆ.