ಬೆಂಗಳೂರು, ಜ 13 (DaijiworldNews/PY): ಕಾಂಗ್ರೆಸ್ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ನಲ್ಲಿ ತಿಳಿಸಿರುವ ಅವರು, "ನನಗೆ ಕೊರೊನಾ ಸೋಂಕು ದೃಢವಾಗಿದೆ. ಕೆಮ್ಮು ಹಾಗೂ ಜ್ವರದ ಲಕ್ಷಣಗಳಿದ್ದು, ಸಂಪೂರ್ಣವಾಗಿ ಲಸಿಕೆ ಪಡೆದ್ದರಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿಲ್ಲ" ಎಂದಿದ್ಧಾರೆ.
"ಈಗ ನಾನು ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.
ವೀರಪ್ಪ ಮೊಯ್ಲಿ ಅವರು ಮೇಕೆದಾಟು ಪಾದಯಾತ್ರೆಯ ಮೊದಲ ದಿನ ಭಾಗವಹಿಸಿದ್ದರು. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರ ಪೈಕಿ ಕೊರೊನಾ ಸೋಂಕಿಗೊಳಗಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.