ನವದೆಹಲಿ, ಜ 13 (DaijiworldNews/AN): ಒಮಿಕ್ರಾನ್ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳ ಎಲ್ಲಾ ಸಿಎಂಗಳೊಂದಿಗೆ ಇಂದು ಸಂಜೆ 4.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.
ಪ್ರಧಾನಿ ಕಳೆದ ವರ್ಷ ಮುಖ್ಯಮಂತ್ರಿಗಳೊಂದಿಗೆ ಹಲವು ಬಾರಿ ಸಭೆ ಕರೆದಿದ್ದು, ಈ ಬಾರಿ ಇದೇ ಮೊದಲ ಸಭೆಯಾಗಿದೆ.
ಜನವರಿ 9 ರಂದು ಪ್ರಧಾನಿ ಕೋವಿಡ್-19 ಕುರಿತು ಪರಿಶೀಲನಾ ಸಭೆಯನ್ನು ನಡೆಸಿದ್ದು, ಇದರಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.
ದೇಶದಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಉಲ್ಬಣಗೊಂಡಿರುವ ಕುರಿತು ಪ್ರಸ್ತಾಪಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು 9,55,319ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತ್ ರಾಜ್ಯಗಳಲ್ಲಿ ಪ್ರಕರಣ ಹೆಚ್ಚಾಗುತ್ತಿದೆ ಎಂದರು.