ನವದೆಹಲಿ, ಜ 13 (DaijiworldNews/AN): ಭಾರತದಲ್ಲಿ ಗುರುವಾರ 2.47 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 380 ಸಾವು ಸಂಭವಿಸಿದೆ.
ದೇಶದಲ್ಲಿ 620 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5,488ಕ್ಕೆ ಏರಿಕೆಯಾಗಿದೆ. ಇದರಲ್ಲಿ ಕನಿಷ್ಠ 2,162 ಮಂದಿ ಗುಣಮುಖರಾಗಿದ್ದಾರೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 84,825 ಮಂದಿ ಗುಣಮುಖರಾಗುವುದರೊಂದಿಗೆ, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 3,47,15,361ಕ್ಕೆ ತಲುಪಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,035ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,54,61,39,465 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.