ಬೆಂಗಳೂರು, ಜ 13 (DaijiworldNews/PY): ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈಗಾಗಲೇ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಹೆಚ್.ಎಂ. ರೇವಣ್ಣ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರಿಗೆ ಕೊರೊನಾ ಪಾಸಿಟವ್ ದೃಢಪಟ್ಟಿದೆ. ಇದೀಗ ಮಲ್ಲಿಕಾರ್ಜು ಖರ್ಗೆಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಖರ್ಗೆಯವರು ಹೋ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ತಮ್ಮ ಸಂಪರ್ಕಕ್ಕೆ ಬಂದಿರುವವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನು, ರೇಷ್ಮೆ, ಯುವ ಸಬಲೀಕರಣ & ಕ್ರೀಡಾ ಇಲಾಖೆ ಸಚಿವ ಕೆ.ಸಿ. ನಾರಾಯಣ ಗೌಡಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ" ಎಂದಿದ್ಧಾರೆ.