ಬೆಂಗಳೂರು, ಜ 13 (DaijiworldNews/PY): "ಪಾದಯಾತ್ರೆಗೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಾದಯಾತ್ರೆಗೆ ಇನ್ನು ಒಂದು ಹೆಜ್ಜೆ ಮುಂದೆ ಹೋಗಲು ಬಿಡುವುದಿಲ್ಲ. ಪಾದಯಾತ್ರೆಯನ್ನು ತಡೆಯಲು ಕಾನೂನು ಪ್ರಕಾರವೇ ಕ್ರಮ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.
"ಪಾದಯಾತ್ರೆಯಲ್ಲಿ ಪಾಲ್ಗೊಂಡ ಹಲವು ಮಂದಿ ಕೊರೊನಾ ದೃಢಪಟ್ಟಿದೆ. ಕಾಂಗ್ರೆಸ್ ರಾಜಕೀಯ ಲಾಭಕ್ಕೋಸ್ಕರ ಪಾದಯಾತ್ರೆ ಮಾಡುತ್ತಿದೆ. ಕಾಂಗ್ರೆಸ್ಗೆ ಮೇಕೆದಾಟು ಯೋಜನೆಯ ಕುರಿತು ಬದ್ಧತೆ ಇಲ್ಲ" ಎಂದು ಹೇಳಿದ್ದಾರೆ.
"ಹೈಕೋರ್ಟ್ ಆದೇಶ ಹಾಗೂ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಬೇಕು" ಎಂದು ಮನವಿ ಮಾಡಿದ್ದಾರೆ.