ನವದೆಹಲಿ, ಜ 13 (DaijiworldNews/AN): ಭಾರತದಲ್ಲಿ 2,47,417 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದು 236 ದಿನಗಳಲ್ಲಿ ದಾಖಲಾದ ಪ್ರಕರಣಗಳಾಗಿವೆ. ಹಾಗೂ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 3,63,17,927 ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,488 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ಸೇರಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊರೊನಾ ಪರಿಸ್ಥಿತಿಯನ್ನು ಪರಿಶೀಲಿಸಿದ ಮೋದಿ, ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಮಕ್ಕಳ ಲಸಿಕಾ ಅಭಿಯಾನವನ್ನು ವೇಗಗೊಳಿಸಲು ಕರೆ ನೀಡಿದ್ದರು.
ಕೊರೊನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಪರಿಣಾಮಕಾರಿ ವಿಧಾನವಾಗಿದ್ದು, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.