ಬೆಂಗಳೂರು, ಜ. 13 (DaijiworldNews/SM): ರಾಜ್ಯದಲ್ಲಿ ಒಮಿಕ್ರಾನ್ ಮತ್ತೆ ಹೆಚ್ಚಳವಾಗಿದೆ. ಗುರುವಾರದ ಆರೋಗ್ಯ ಇಲಾಖೆಯ ವರದಿ ಪ್ರಕಾರ 25,005 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲೇ ಅತ್ಯಧಿಕ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 18,374 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಮತ್ತೆ 2,363 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರು ಮೂವರು ಸೇರಿದಂತೆ ರಾಜ್ಯದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ. 12.39 ರಷ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.