ಬೆಂಗಳೂರು, ಜ. 13 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗಿರುವ ಬಗ್ಗೆ ಆರೋಗ್ಯ ಇಲಾಖೆ ಉಲ್ಲೇಖ ಮಾಡುತ್ತಿದ್ದು, ಇದರ ಬೆನ್ನಲ್ಲೇ ಪರೀಕ್ಷೆ ಮಾಡುವ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ನಿತ್ಯ 2.5 ಲಕ್ಷ ಪರೀಕ್ಷೆಗಳನ್ನು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಬೆಂಗಳೂರು ನಗರವೊಂದರಲ್ಲೇ 30,000 ಕ್ಕೆ ಹೆಚ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಟ್ರೇಸ್, ಟ್ರ್ಯಾಕ್, ಟೆಸ್ಟ್, ಟ್ರೀಟ್, ಟೆಕ್ನಾಲಜಿ ತಂತ್ರ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರತಿ ಲ್ಯಾಬ್ ಒಂದು ಸಮಯದಲ್ಲಿ 1875 ಮಾದರಿಗಳನ್ನು ಪ್ರಕ್ರಿಯೆಗೊಳಿಸಬಹುದು ಎಂದಿದ್ದಾರೆ.
ಹೊರ ರಾಜ್ಯಗಳಿಂದ ಬರುವವರಿಗೆ RTPCR ಪರೀಕ್ಷೆ ಕಡ್ಡಾಯ. 74ಗಂಟೆಯೊಳಗಿನ ನೆಗೆಟಿವ್ ವರದಿ ತರಬೇಕಿದೆ ಎಂದರು. ಆಸ್ಪತ್ರೆಗಳಲ್ಲಿ ಒಟ್ಟು ಹಾಸಿಗೆಗಳ ಪೈಕಿ ಶೇ. 30 ರಷ್ಟು ಹಾಸಿಗೆಗಳನ್ನು ಮಕ್ಕಳಿಗೆ ಮೀಸಲಿಡಲಾಗುತ್ತದೆ ಎಂದರು.