ಬೆಂಗಳೂರು, ಜ 14 (DaijiworldNews/HR): ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೊದಲನೇ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಕೇಂದ್ರ ಆಯವ್ಯಯ ಮಂಡಿಸಲಿದ್ದು, ಜನವರಿ 31ರಿಂದ ಫೆಬ್ರವರಿ 11ರವರೆಗೆ ಹಾಗೂ ಮಾರ್ಚ್ 14 ರಿಂದ ಏಪ್ರಿಲ್ 8ರವರೆಗೆ ಎರಡು ಹಂತದಲ್ಲಿ ಬಜೆಟ್ ಅಧಿವೇಶನದ ಕಲಾಪಗಳು ನಡೆಯಲಿದೆ.
ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿದೆ.
ಬಳಿಕ ಒಂದು ತಿಂಗಳ ಅವಧಿಯ ವಿರಾಮದ ನಂತರ ಅಧಿವೇಶನದ 2ನೇ ಭಾಗ ಮಾರ್ಚ್ 14 ರಿಂದ ಪ್ರಾರಂಭವಾಗಿ ಏಪ್ರಿಲ್ 8 ರಂದು ಮುಕ್ತಾಯಗೊಳ್ಳುತ್ತದೆ ಎಂದು ತಿಳಿದು ಬಂದಿದೆ.