ಬೆಂಗಳೂರು, ಜ 14 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 28,723 ಹೊಸ ಪ್ರಕರಣ ದಾಖಲಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 28,723 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇ 12.98ಕ್ಕೆ ಏರಿಕೆಯಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳು 1,41,337 ಆಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 3105 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 14 ಜನರು ಮೃತಪಟ್ಟಿದ್ದು, ಬೆಂಗಳೂರು ನಗರದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ.