ನವದೆಹಲಿ, ಜ 15 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 2,68,833 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 2,68,833 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ನಡುವೆ 1,22,684 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 402 ಮಂದಿ ಸೋಂಕಿಗೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 4,85,752ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಇಂದು 2,68,833 ಕೋವಿಡ್ ಪಾಸಿಟಿವ್ ಬಂದ ಕಾರಣ, ಸಕ್ರೀಯ ಸೋಂಕಿತರ ಸಂಖ್ಯೆ 14,17,820ಕ್ಕೆ ಏರಿಕೆಯಾಗಿದೆ. ಈ ಮೂಲಕ ಪಾಸಿಟಿವಿಟಿ ದರ ಶೇ.16.66ಕ್ಕೆ ಏರಿಕೆಯಾಗಿದೆ. ಕೊರೊನಾ ಜೊತೆ ಜೊತೆಗೆ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದ್ದು. ಇದುವರೆಗೆ 6,041 ಜನರಿಗೆ ಒಮಿಕ್ರಾನ್ ದೃಢಪಟ್ಟಿದೆ ಎಂದು ತಿಳಿಸಿದೆ.