ವಡೋದರಾ, ಜ 15 (DaijiworldNews/PY): ಅಪ್ರಾಪ್ತ ಬಾಲಕನೋರ್ವ ತನ್ನ ಇಬ್ಬರು ಸ್ನೇಹಿತರ ಸಹಾಯದಿಂದ 16 ವರ್ಷದ ಬಾಲಕಿಯನ್ನು ನಿಲ್ಲಿಸಿದ್ದ ಬಸ್ಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗುಜರಾತ್ನ ವಡೋದರಾದ ನ್ಯೂ ವಿಐಪಿ ರಸ್ತೆ ಪ್ರದೇಶದಲ್ಲಿ ನಡೆದಿದೆ.
ಜ.2ರಂದು ರಾತ್ರಿ 8ರ ಸುಮಾರಿಗೆ ಬಾಲಕ ಹಾಗೂ ಅವನ ಇಬ್ಬರು ಸಹಚರರು ಹುಡುಗಿಯನ್ನು ರಸ್ತೆಯಲ್ಲಿ ನಿಲ್ಲಿಸಿದ್ದ ಐಷಾರಾಮಿ ಬಸ್ಗೆ ಎಳೆದೊಯ್ದಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಲ್ಲದೇ, ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಬಳಿಕ ಹುಡುಗಿಯ ಚಿಕ್ಕಪ್ಪ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದ್ದು, ಆತನ ಇಬ್ಬರು ಸಹಚರರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ.