ಜಮ್ತಾರಾ, ಜ 15 (DaijiworldNews/HR): ಜಾರ್ಖಂಡ್ನ ಜಮ್ತಾರಾದಲ್ಲಿನ ರಸ್ತೆಗಳು ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಕೆನ್ನೆಗಿಂತ ಸುಂದರವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಡಾ ಇರ್ಫಾನ್ ಅನ್ಸಾರಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಇರ್ಫಾನ್ ಅನ್ಸಾರಿ, ಜಮಾತಾರಾದಲ್ಲಿ 14 ವಿಶ್ವ ದರ್ಜೆಯ ರಸ್ತೆಗಳ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ರಸ್ತೆಗಳು ಕಂಗನಾ ರಣಾವತ್ ಅವರ ಕೆನ್ನೆಗಿಂತ ಉತ್ತಮವಾಗಿರುವುದಾಗಿ ಭರವಸೆ ನೀಡುತ್ತೇನೆ ಎಂದಿದ್ದಾರೆ.
ಇನ್ನು ಕಳೆದ ವರ್ಷ ನವೆಂಬರ್ ನಲ್ಲಿ ಹೊಸದಾಗಿ ನೇಮಕಗೊಂಡ ರಾಜಸ್ಥಾನ ಸಚಿವ ರಾಜೇಂದ್ರ ಸಿಂಗ್ ಗುಧಾ, ರಾಜ್ಯದ ರಸ್ತೆಗಳನ್ನು ನಟಿ ಕತ್ರಿನಾ ಕೈಫ್ ಕೆನ್ನೆಗಳಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು.