ದಾವಣಗೆರೆ, ಜ 15 (DaijiworldNews/PY): "ರಾಜ್ಯದಲ್ಲಿ ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟ ರಚನೆಯಾಗಬೇಕು" ಎಂದು ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮಲ್ಲಿ ಕೆಲ ನಾಯಕರು ಸಚಿವರಾದವರೇ ಮತ್ತೆ ಮತ್ತೆ ಸಚಿವರಾಗುತ್ತಿದ್ದಾರೆ. ಈ ಪದ್ಧತಿ ಬದಲಾಗಬೇಕು. ಹೊಸ ಮುಖಗಳಿಗೆ ಸ್ಥಾನ ದೊರಕಬೇಕು. ಸಚಿವರಾದವರು ಪಕ್ಷ ಸಂಘಟನೆಯಲ್ಲಿ ಶ್ರಮಿಸಬೇಕು. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು" ಎಂದಿದ್ದಾರೆ.
"ನನಗೆ ಸಚಿವ ಸ್ಥಾನ ನೀಡುವಂತೆ ಶಾಸಕಾಂಗ ಸಭೆಯಲ್ಲಿ ವಿಚಾರ ಪ್ರಸ್ತಾಪಿಸಿದ್ದೇನೆ. ಹಾಗೆಂದು ಈ ಹಿಂದಿನಂತೆ ರೆಸಾರ್ಟ್ ರಾಜಕಾರಣ ಮಾಡುವುದಿಲ್ಲ. ನಾಲ್ಕು ಗೋಡೆಯ ಮಧ್ಯೆಯೇ ನನ್ನ ವಾದವನ್ನು ಹೇಳುತ್ತೇನೆ" ಎಂದು ತಿಳಿಸಿದ್ದಾರೆ.