ನವದೆಹಲಿ, ಜ 15 (DaijiworldNews/HR): ಒಂದು ತಿಂಗಳ ಮಗುವೊಂದು ಕೊರೊನಾ ಸೋಂಕಿನ ವಿರುದ್ದ ಹೋರಾಡಿ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಘಟನೆ ದೆಹಲಿಯ ಮೂಲಚಂದ್ ಆಸ್ಪತ್ರೆಯಲ್ಲಿ ನಡೆದಿದೆ.
ಕಿವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದ ಮಗುವಿಗೆ ಕೊರೊನಾ ಇರುವುದು ಪತ್ತೆಯಾಗಿದ್ದು, ಆ ಹಿನ್ನೆಲೆಯಲ್ಲಿ ಮಗುವನ್ನು ಆಸ್ಪತ್ರೆಯಲ್ಲಿಯೇ ಇರಿಸಿಕೊಂಡು ಚಿಕಿತ್ಸೆ ನೀಡಲಾಯಿತು. ಈಗ ಸಂಪೂರ್ಣ ಚೇತರಿಕೆಯೊಂದಿಗೆ ಮಗುವನ್ನು ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ.
ಈ ಕುರಿತು ವಿಡಿಯೊ ಟ್ವೀಟ್ ಮಾಡಿರುವ ಆಸ್ಪತ್ರೆ, "ಕಿವಿಯ ಚಿಕಿತ್ಸೆಗಾಗಿ ಒಂದು ತಿಂಗಳ ಮಗುವನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಬಳಿಕ ಮಗುವಿಗೆ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ಪತ್ತೆಯಾಗಿತು. ಪೂರ್ಣ ಚೇತರಿಕೆಯೊಂದಿಗೆ ಮಗುವನ್ನು ಬಿಡುಗಡೆ ಮಾಡಲಾಗುತ್ತಿದೆ" ಎಂದು ತಿಳಿಸಿದೆ.