ಲಕ್ನೋ, ಜ 16 (DaijiworldNews/MS): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಗೋರಖ್ಪುರ ನಗರ ಕ್ಷೇತ್ರದಿಂದ ತಮ್ಮನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಯೋಗಿ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರ ಶ್ರಮದಿಂದ ಎಲ್ಲ ಕ್ಷೇತ್ರದಲ್ಲೂ ಜಯಗಳಿಸಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.
"ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೋರಖ್ಪುರ ನಗರದಿಂದ ನನ್ನನ್ನು ಕಣಕ್ಕಿಳಿಸಲು ನಿರ್ಧರಿಸಿದ ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷರು ಮತ್ತು ಬಿಜೆಪಿ ಸಂಸದೀಯ ಮಂಡಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಪ್ರಸ್ತುತ ಮತ್ತು ಹಿಂದಿನ ಪ್ರತಿನಿಧಿಗಳ ಸಹಾಯದಿಂದ ಬಿಜೆಪಿ ಗೋರಖ್ಪುರದಲ್ಲಿ ಮಾತ್ರವಲ್ಲ. ಆದರೆ ಇಡೀ ರಾಜ್ಯದಲ್ಲಿ ಮತ್ತೆ ಪ್ರಚಂಡ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲಿದೆ.
ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಆಡಳಿತವನ್ನು ಜನರು ನೋಡಿದ್ದಾರೆ. ಹೀಗಾಗಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಷಯಗಳಲ್ಲಿ ಬಿಜೆಪಿ ಹೇಗೆ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದು ಎಲ್ಲರ ಮುಂದಿದೆ ಹೀಗಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಆದಿತ್ಯನಾಥ್ ಅವರು ಹೇಳಿದ್ದಾರೆ.