ಹಾವೇರಿ, 16 (DaijiworldNews/HR): ರಟ್ಟಿಹಳ್ಳಿ ತಾಲೂಕಿನ ಕಡೂರಿನಲ್ಲಿ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಮಕರ ಸಂಕ್ರಮಣ ಹಬ್ಬದ ದಿನದಂದು ದೇವರ ದರ್ಶನಕ್ಕೆಂದು ಒಂದೇ ಕುಟುಂಬದವರು ಎರಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಈ ವೇಳೆ ಲಾರಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಇನ್ನು ಈ ಬಗ್ಗೆ ರಟ್ಟೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.