ಮುಂಬೈ, ಜ 16 (DaijiworldNews/HR): ಕೊರೊನಾ ಹಾಗೂ ನ್ಯುಮೋನಿಯಾದಿಂದ ಕಳೆದ ಒಂದು ವಾರದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವ್ರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಲತಾ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಆರೈಕೆಯ ಅಗತ್ಯವಿದೆ, ಅದಕ್ಕಾಗಿಯೇ ಅವರನ್ನು ಐಸಿಯುನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ. ಅವರು ಕರೋನಾ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಗಾಯಕಿ ಲತಾ ಅವರಿಗೆ ಚಿಕಿತ್ಸೆ ಮುಂದುವರೆಯುತ್ತಿರುವುದರಿಂದ, ಅವರ ಚೇತರಿಕೆಗಾಗಿ ಜನರು ಪ್ರಾರ್ಥಿಸಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರಾದ ಲತಾ ಮಂಗೇಶ್ಕರ್ ಅವರು 1942 ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿ ಬಳಿಕ ಅನೇಕ ಭಾರತೀಯ ಭಾಷೆಗಳಲ್ಲಿ 30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.