ನವದೆಹಲಿ, ಜ 17 (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣ ನಿನ್ನೆಗಿಂತ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 385 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿ ಇಂದು 385 ಮಂದಿ ಮೃತಪಟ್ಟಿದ್ದು, ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 486451 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1656341 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 151740 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 35237461 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಭಾನುವಾರ 39,46,348 ಮಂದಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,57,20,41,825 ಜನರಿಗೆ ಲಸಿಕೆ ಹಾಕಲಾಗಿದೆ.