ನವದೆಹಲಿ, ಜ 17 (DaijiworldNews/HR): ಒತ್ತಾಯ ಪೂರ್ವಕವಾಗಿ ವ್ಯಕ್ತಿಯ ಒಪ್ಪಿಗೆಯಿಲ್ಲದೆ ಯಾರಿಗೂ ಕೊರೊನಾ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಆದೇಶಿಸಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ತಿಳಿಸಿದೆ.
ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದ್ದು, ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಎಂಬ ಎನ್ಜಿಒ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.
ಇನ್ನು ಕೊರೊನಾ ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ ತಂದಿಲ್ಲ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ ಹೊರತು ಯಾರ ಮೇಲೂ ಅದನ್ನೂ ಹೇರುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.