ನವದೆಹಲಿ, ಜ 18 (DaijiworldNews/HR): ಭಾರತದಲ್ಲಿ ಇಂದು ನಿನ್ನೆಗೊಂತ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳು ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 2,38,018 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 310 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,38,018 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 310 ಜನ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486451 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1736628 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 157421 ಜನರು ಕೊರೊನಾದಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 35394882 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋಮವಾರ 79,91,230 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,58,04,41,770 ಜನರಿಗೆ ಲಸಿಕೆ ಹಾಕಲಾಗಿದೆ.