ಬೆಂಗಳೂರು, ಜ. 18 (DaijiworldNews/SM): ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿತ್ಯ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ಶಾಲಾ ಕಾಲೇಜುಗಳನ್ನು ಮುಂದಿನ ಇಪ್ಪತ್ತು ದಿನಗಳಿಗೆ ಮುಚ್ಚುವುದು ಒಳ್ಳೆಯದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದ ನಡುವೆ ಗೊಂದಲವಿದೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
"ಶಾಲಾ-ಕಾಲೇಜು, ವಸತಿ ನಿಲಯಗಳನ್ನು ಕೆಲ ಕಾಲ ಬಂದ್ ಮಾಡುವುದು ಒಳ್ಳೆಯದು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಸರಕಾರ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.