ನವದೆಹಲಿ, ಜ 19 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,82,970 ಮಂದಿಗೆ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ. 15.13 ರಷ್ಟು ಹೆಚ್ಚಳವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,82,970 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 441 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 1,88,157 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ 18,31,000 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಇಲ್ಲಿಯವರೆಗೆ 8,961 ಒಟ್ಟು ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆಯಿಂದ 0.79% ಹೆಚ್ಚಳವಾಗಿದೆ.