ನವದೆಹಲಿ ಜ 20 (DaijiworldNews/MS): ಭಾರತದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 3,17,532 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 491 ಮಂದಿ ಸಾಂಕ್ರಮಿಕಕ್ಕೆ ಬಲಿಯಾಗಿದ್ದಾರೆ.
ಹೊಸ ಪ್ರಕರಣಗಳೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 38218773ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,24,051ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,23,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,58,07,029 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 18,69,642 ಮಂದಿಯನ್ನು ಕೊವೀಡ್ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,74,21,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.