ಬೆಂಗಳೂರು,ಜ 21 (DaijiworldNews/HR): ಕರ್ನಾಟಕದಲ್ಲಿ ಶೇ. 66ರಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ 15 ರಿಂದ 18 ವರ್ಷ ವರ್ಗದ ಮಕ್ಕಳಲ್ಲಿ ಮೂರನೇ ಎರಡು ಭಾಗದಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ" ಎಂದರು.
ಲಸಿಕೆ ಅಭಿಯಾನದಲ್ಲಿ ಗದಗ ಜಿಲ್ಲೆ ಮಕ್ಕಳ ಮೊದಲ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಈ ವರ್ಗದ ಶೇ 99 ಮಕ್ಕಳು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಗುಲ್ಬರ್ಗ ಜಿಲ್ಲೆಯಲ್ಲಿ ಕೇವಲ ಶೇ 51ರಷ್ಟು ಮಕ್ಕಳು ಮಾತ್ರ ಮೊದಲ ಡೋಸ್ ಲಸಿಕೆ ಹೊಂದಿರುವುದರಿಂದ. ಜಿಲ್ಲೆ ಲಸಿಕೆ ಅಭಿಯಾನದಲ್ಲಿ ಕೊನೆಯ ಸ್ಥಾನವನ್ನು ಪಡೆದಿದೆ" ಎಂದಿದ್ದಾರೆ.
ಇನ್ನು ಕೊಡಗು ಮತ್ತು ಉಡುಪಿಯಲ್ಲಿ ಶೇ 87, ಉತ್ತರ ಕನ್ನಡ ಶೇ 83, ಬೆಂಗಳೂರು ನಗರ, ದಕ್ಷಿಣ ಕನ್ನಡ ಶೇ 79, ಬಾಗಲಕೋಟೆ ಶೇ 77, ಶಿವಮೊಗ್ಗ ಶೇ 76, ಧಾರವಾಡ ಶೇ 75, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಶೇ 74, ಚಿಕ್ಕಮಗಳೂರು ಶೇ 73 ರಷ್ಟು ಲಸಿಕೆಯನ್ನು ನೀಡಿ ಮೊದಲ ಹತ್ತು ಸ್ಥಾನದಲ್ಲಿವೆ" ಎಂದು ತಿಳಿಸಿದ್ದಾರೆ.