ನವದೆಹಲಿ, ಜ. 21 (DaijiworldNews/SM): ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಂಚರಾಜ್ಯಗಳ ಚುನಾವಣಾ ಪ್ರಚಾರದ ವಿಚಾರ ನಾಳೆ ನಿರ್ಧಾರವಾಗಲಿದೆ.
ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ.
ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ, ತಜ್ಞರು, ಚುನಾವಣೆ ನಡೆಯಲಿರುವ ಐದು ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಂದ ಅಭಿಪ್ರಾಯ ನೀಡಲಿದು, ಆ ಬಳಿಕ ಅಂತಿಮ ನಿರ್ಧಾರ ಪ್ರಕಟವಾಗಲಿದೆ.