ನವದೆಹಲಿ, ಜ 22 (DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,37,704 ಮಂದಿಯಲ್ಲಿ ಸೋಂಕು ಪತ್ತೆಯಾಗಿ ದಿನದ ಪಾಸಿಟಿವಿಟಿ ರೇಟ್ ಶೇ.17.22ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 3,37,704 ಮಂದಿಯಲ್ಲಿ ಸೋಂಕು ದ್ರುಢಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 488 ಜನ ಮಹಾಮಾರಿಗೆ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 488884ಕ್ಕೆ ಏರಿಕೆಯಾಗಿದೆ.
ಇನ್ನು 2113365 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 242676 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36301482 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರ 67,49,746 ಮಂದಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,61,16,60,078 ಜನರಿಗೆ ಲಸಿಕೆ ಹಾಕಲಾಗಿದೆ.