ಬೆಂಗಳೂರು ಜ 22 (DaijiworldNews/KP): ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರಿಗೆ ನಿನ್ನೆ ಕೊರೊನಾ ಸೋಂಕು ತಗುಲಿದ್ದು ತಕ್ಷಣ ಅವರನ್ನು ಬೆಂಗಳೂರಿನ ಮಣಿಪಾಲ ಅಸ್ಪತ್ರೆಗೆ ದಾಖಲಾಗಿದೆ.
ಕೊರೊನಾ ಎರಡನೇ ಅಲೆಯ ಸಮಯದಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ನಿನ್ನೆ ಶೀತ ಮತ್ತು ಜ್ವರ ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಕೊವಿಡ್ ಪಾನಿಟಿವ್ ಬಂದಿದ್ದು, ಅವರ ಆರೋಗ್ಯ ಬಗ್ಗೆ ಹೆಚ್ಚಿನ ನಿಗಾ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಾಜಿ ಪ್ರಧಾನಿ ದೇವೇಗೌಡರ ಜತೆ ಮಾತನಾಡುತ್ತೇನೆ. ಜೊತೆಗೆ ಅವರ ಕುಟುಂಬ ಮತ್ತು ಮಣಿಪಾಲ್ ವೈದ್ಯರ ಜೊತೆಗೆ ಮಾತನಾಡುತ್ತೇನೆ. ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಆದರೆ ಕೋವಿಡ್ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೋವಿಡ್ ತೀವ್ರತೆ ಇರಲಿಕ್ಕಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿದ ವಿಷಯ ತಿಳಿಯುತಿದ್ದಂತೆ, ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾರೈಸಿದ್ದಾರೆ.
ಜನವರಿ 15ಕ್ಕೆ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿತ್ತು, ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು.