ಬೆಂಗಳೂರು, ಜ 22 (DaijiworldNews/HR): ಆಸ್ಪತ್ರೆಗೆ ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಪರಿಸ್ಥಿತಿ ಕೈ ಮೀರಿದರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದರು.
ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ಆಕಾಂಕ್ಷಿಗಳು ದೆಹಲಿ ಭೇಟಿ ಗೊತ್ತಿಲ್ಲ. ನಾನು ಮೂರನೇ ಅಲೆಯಲ್ಲಿ ಸಿಕ್ಕಿಹಾಕಿಕೊಂಡಿದ್ದೇನೆ. ರಾಜಕೀಯದ ಕಡೆ ಗಮನ ಹರಿಸಿಲ್ಲ ಎಂದು ಹೇಳಿದ್ದಾರೆ.