ನವದೆಹಲಿ, ಜ 22 (DaijiworldNews/HR): ಮುಂಬೈಯ ನಗರದ ಟಾರ್ಡಿಯೊದಲ್ಲಿನ ನಾನಾ ಚೌಕ್ನಲ್ಲಿರುವ ಕಮಲಾ ಬಿಲ್ಡಿಂಗ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದ್ದು, ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅಲ್ಲದೆ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ" ಎಂದರು.
ಇನ್ನು ಮುಂಬೈನ ತಾರ್ಡಿಯೊ ಪ್ರದೇಶದ ಗೋವಾಲಿಯ ಟ್ಯಾಂಕ್ನಲ್ಲಿರುವ ಗಾಂಧಿ ಆಸ್ಪತ್ರೆ ಎದುರಿನ ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಕನಿಷ್ಠ 17 ಜನ ಗಾಯಗೊಂಡಿದ್ದಾರೆ.