ಬೆಂಗಳೂರು, ಜ 22 (DaijiworldNews/HR): ನಾನು ಸೋತಿದ್ದೇನೆ. ಅವರ ಅಪ್ಪ ಸೋತಿಲ್ವಾ, ಮಗ ಸೋತಿಲ್ವಾ,ಅಣ್ಣ ಸೋತಿಲ್ವಾ? ದೇವೇಗೌಡರು,ರೇವಣ್ಣ ಸೋತಿಲ್ವಾ ಎಂದು ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಹೇಳಿಕೆಗೆ ರಿಯಾಕ್ಟ್ ಮಾಡುವುದಿಲ್ಲ.ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆಯಲ್ಲಿ ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಮತದಾರ ಕೊಟ್ಟ ತೀರ್ಪನ್ನ ನಾವು ಸ್ವೀಕಾರ ಮಾಡಬೇಕು" ಎಂದರು.
ಇನ್ನು ನಾನು ಸೋತಿದ್ದೇನೆ. ಅವರ ಅಪ್ಪ ಸೋತಿಲ್ವಾ, ಮಗ ಸೋತಿಲ್ವಾ,ಅಣ್ಣ ಸೋತಿಲ್ವಾ? ದೇವೇಗೌಡರು, ರೇವಣ್ಣ ಸೋತಿಲ್ವಾ ಎಂದು ತಿರುಗೇಟು ನೀಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪು ಅಂತಿಮ. ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ದರು ಅಂತಾನೇ ಗೊತ್ತಿಲ್ಲ. ನಾನೇಕೆ ಇವರ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಲಿ ಎಂದು ಹೇಳಿದ್ದಾರೆ.