ನವದೆಹಲಿ, ಜ 22(DaijiworldNews/MS): ವಿದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಗುರುವಾರ ಬಿಡುಗಡೆಯಾದ ತನ್ನ ಪರಿಷ್ಕೃತ 'ಅಂತರರಾಷ್ಟ್ರೀಯ ಆಗಮನದ ಮಾರ್ಗಸೂಚಿ'ಯಲ್ಲಿ, ವಿದೇಶಗಳಿಂದ ಬರುವವರು ಮನೆಯಲ್ಲೇ ಕ್ವಾರಂಟೈನ್ನಲ್ಲಿ ಇರಬಹುದಾಗಿದೆ.
ಇದುವರೆಗೆ ವಿದೇಶಗಳಿಂದ ಬರುವವರಲ್ಲಿ ಕೋವಿಡ್ ದೃಢಪಟ್ಟರೆ ಕಡ್ಡಾಯವಾಗಿ ಪ್ರತ್ಯೇಕ ಐಸೋಲೇಷನ್ ಕೇಂದ್ರದಲ್ಲಿ ಕ್ವಾರಂಟೈನ್ಗೆ ಒಳಪಡಬೇಕು ಎಂಬ ನಿಬಂಧನೆಯಿತ್ತು.ಆದರೆ ಈಗ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಮನೆಯಲ್ಲೇ ಕ್ವಾರಂಟೈನ್ನಲ್ಲಿ ಇರಬಹುದಾಗಿದೆ. ಪಾಸಿಟಿವ್ ಪರೀಕ್ಷೆ ಮಾಡಿದ ವಿದೇಶದಿಂದ ಬಂದ ಪ್ರಯಾಣಿಕರು ನೆಗೆಟಿವ್ ಪರೀಕ್ಷೆ ಮಾಡಿದ ನಂತರವೂ ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ ಮತ್ತು ಎಂಟನೇ ದಿನದಂದು ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರ ಹೇಳಿದೆ.
ಪರಿಷ್ಕೃತ ಮಾರ್ಗಸೂಚಿಗಳು ಶನಿವಾರದಿಂದಲೇ ಜಾರಿಗೆ ಬಂದಿವೆ. ಸ್ಕ್ರೀನಿಂಗ್ ಸಮಯದಲ್ಲಿ ರೋಗಲಕ್ಷಣಗಳು ಕಂಡುಬಂದರೆ ಇನ್ನೂ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುವುದು ಎಂದು ಸರ್ಕಾರ ಹೇಳಿದೆ.