ಮುಂಬೈ, ಜ 22 (DaijiworldNews/HR): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಕೊರೊನಾ ಹಾಗೂ ನ್ಯುಮೋನಿಯಾದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಬಗ್ಗೆ ಸುಳ್ಳು ವದಂತಿ ಹರಡಬೇಡಿ ಎಂದು ಅವರ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಲತಾ ಮಂಗೇಶ್ಕರ್ ಅವರ ಬಗ್ಗೆ ಯಾವುದೇ ಸುಳ್ಳು ಸುದ್ದಿಗೆ ಆಸ್ಪದ ನೀಡಬೇಡಿ, ಐಸಿಯುವಿನಲ್ಲಿದ್ದಾರೆ ಹಾಗೂ ಡಾ ಪ್ರತೀತ್ ಸಮ್ದನಿ ಮತ್ತವರ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ ಎಂದಿದ್ದಾರೆ.
ಇನ್ನು ಕಳೆದ ವಾರ ಕೂಡ ಲತಾ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂಬ ಸುದ್ದಿ ಹರಡಿದಾಗ ಇದೇ ರೀತಿಯ ಹೇಳಿಕೆ ನೀಡಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದರು.