ಶೋಪಿಯಾನ್, ಜ 22 (DaijiworldNews/KP): ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಭಯೋತ್ಪಾದಕ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ.
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ಶಂಕಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಶ್ರೀನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನ ಹೆಚ್ಚಿಸಲಾಗಿದೆ. ಭಯೋತ್ಪಾದಕರ ದುಷ್ಕೃತ್ಯಗಳನ್ನು ದಿನದಿಂದ ದಿನಕ್ಕೆ ತಗ್ಗಿಸಲು ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ನಡೆಸುತಿದ್ದಾರೆ.
ಇಂದು ಬೆಳಗ್ಗೆ ಕಲ್ಬಿಲ್ ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಗಳು ಹಾಗೂ ಭಯೋತ್ಪಾದಕರು ಮನೆಯೊಂದರಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ತಿಳಿದುಕೊಂಡು,ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದ ತಕ್ಷಣ ಉಗ್ರರು ಗುಂಡು ಹಾರಿಸಲು ಪ್ರಾರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಸೇನೆ ಗುಂಡಿನ ಚಕಮಕಿ ನಡೆದ ಪರಿಣಾಮ ಒಬ್ಬ ಉಗ್ರ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.