ಬೆಂಗಳೂರು, ಜ 22(DaijiworldNews/MS): ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42,470 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 34,67,472ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಪಾಸಿಟಿವ್ ಪ್ರಕರಣಗಳ ಸಂಖ್ಯೆ 42 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 19.33ಕ್ಕೆ ಏರಿಕೆಯಾಗಿದೆ. ಇನ್ನು ಇಂದು 26 ಮಂದಿ ಕೋವಿಡ್ ಗೆ ಬಲಿಯಾಗಿದ್ದು ಒಟ್ಟಾರೆ ಸಾವಿನ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಇಂದು 35,140 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3,30,447ಕ್ಕೆ ಏರಿಕೆಯಾಗಿದೆ. ಇಂದು ಒಟ್ಟು 2,19,699 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.