ಬೆಂಗಳೂರು, ಜ 23 (DaijiworldNews/HR): ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಜುನಾಥ್ ಅವರು1953ರಲ್ಲಿ ಜನಿಸಿದ್ದು, 1974ರಲ್ಲಿ ವಕೀಲರಾಗಿ ಹೈಕೋರ್ಟ್ನಲ್ಲಿ ಅಭ್ಯಾಸ ಆರಂಭಿಸಿ ಬಳಿಕ 2000ನೇ ಇಸವಿಯಲ್ಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. 2001ರಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರಾಗಿ ನೇಮವಾಗಿದ್ದರು.
ಇನ್ನು ಭಾನುವಾರ ಮಧ್ಯಾಹ್ನ 12 ಗಂಟೆಯವರೆಗೆ ಮೃತರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನೆಲಮಂಗಲದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.