ಬೆಂಗಳೂರು, ಜ 23 (DaijiworldNews/HR): ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೊರೊನಾದ 3 ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂಬುದಾಗಿ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ" ಎಂದರು.
ಇನ್ನು ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ್ದು, ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ರಾಜ್ಯ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಿದೆ" ಎಂದು ತಿಳಿಸಿದ್ದಾರೆ.