ನವದೆಹಲಿ, ಜ 23 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,33,533 ಮಂದಿಗೆ ಸೋಂಕು ದೃಢಪಟ್ಟಿದ್ದು, 525 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,33,533 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 525 ಮಂದಿ ಬಲಿಯಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205ಗೆ ತಲುಪಿದೆ.
ಇನ್ನು ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇಕಡಾ 93.18 ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ ಕನಿಷ್ಠ 2,59,168 ಜನರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದಾರೆ, ಒಟ್ಟು ಗುಣಮುಖರಾದವರ ಸಂಖ್ಯೆ 3,65,60,650 ಕ್ಕೆ ತಲುಪಿದೆ.
ದೈನಂದಿನ ಪಾಸಿಟಿವಿಟಿ ದರವು ಶೇಕಡಾ 17.78 ರಷ್ಟಿದ್ದರೆ, ವಾರದ ಪಾಸಿಟಿವಿಟಿ ರೇಟ್ ಶೇಕಡಾ 16.87 ರಷ್ಟಿದೆ.