ಬೆಂಗಳೂರು, ಜ. 23 (DaijiworldNews/SM): ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಆರೋಗ್ಯ ಇಲಾಖೆ ನೀಡಿರುವ ವರದಿಯಲ್ಲಿ ಉಲ್ಲೇಖಿಸಿದೆ. ರವಿವಾರ ಬಿಡುಗಡೆ ಮಾಡಲಾದ ವರದಿ ಪ್ರಕಾರ ರಾಜ್ಯದಲ್ಲಿ ಮತ್ತೆ 50,210 ಹೊಸ ಪ್ರಕರಣಗಳು ಪತ್ತೆಯಾಗಿವೆ.
ರವಿವಾರದ ವರದಿ ಪ್ರಕಾರ 19 ಮಂದಿ ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇನ್ನು ರಾಜಧಾನಿ ಬೆಂಗಳೂರು ಒಂದರಲ್ಲೇ 26,299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 22,842 ಮಂದಿ ಸೋಂಕಿತರು ಗುಣಮುಖರಾಗಿದ್ದು, ರಾಜ್ಯಾದ್ಯಂತ ಒಟ್ಟು 2,20,459 ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.