ನವದೆಹಲಿ, ಜ 24 (DaijiworldNews/MS): ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕೋವಿಡ್ ಸೋಂಕು ಕಂಡುಬಂದಿದೆ. ಈ ಬಗ್ಗೆಅವರು ಟ್ವಿಟರ್ಗೆ ನಲ್ಲಿ ಮಾಹಿತಿ ತಿಳಿಸಿದ್ದು ಯಾವುದೇ ಚಿಂತೆ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.
'ನನ್ನ ವೈದ್ಯರು ಸೂಚಿಸಿದಂತೆ ನಾನು ಚಿಕಿತ್ಸೆಯನ್ನು ಅನುಸರಿಸುತ್ತಿದ್ದೇನೆ.
ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರನ್ನು ಪರೀಕ್ಷಿಸಲು ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ' ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.