ನವದೆಹಲಿ, ಜ 25 (DaijiworldNews/KP): ಪ್ರತಿ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿ ಪೊಲೀಸ್ ಪದಕ ಹಾಗೂ ರಾಷ್ಟ್ರಪತಿ ಪದಕಗಳನ್ನು ಘೋಷಿಸಲಾಗಿದ್ದು, ಈ ಬಾರಿ ಕರ್ನಾಟಕ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಪೊಲೀಸ್ ಪದಕ ಸಲ್ಲಿದೆ.
ಸಾಂದರ್ಭಿಕ ಚಿತ್ರ
ಪ್ರತಿ ವರ್ಷದಂತೆ ಈ ವರ್ಷವು ಕೇಂದ್ರ ಗೃಹ ಇಲಾಖೆಯಿಂದ ಪದಕಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಣರಾಜ್ಯೋತ್ಸವ ಸಂದರ್ಭದಲ್ಲಿ ಪೊಲೀಸರ ಶೌರ್ಯಕ್ಕಾಗಿ ನೀಡಲಾಗುವ ಪೊಲೀಸ್ ಪದಕವನ್ನು 189 ಪೊಲೀಸರಿಗೆ, 88 ಪೊಲೀಸರಿಗೆ ರಾಷ್ಟ್ರಪತಿ ಪೊಲೀಸ್ ಪದಕ ಹಾಗೂ ಉತ್ತಮ ಸೇವೆ ಸಲ್ಲಿಸಿದ 662 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪೊಲೀಸ್ ಪದಕ ಸಂದಿದೆ.
ಇದುವರೆಗೂ ಉತ್ತಮ ಸೇವೆ ಸಲ್ಲಿಸಿದ ಅನೇಕ ಪೊಲೀಸರಿಗೆ ಪದಕ ದೊರಕಿದ್ದು, ಅದರಂತೆ ಈ ಬಾರಿಯ ಗಣರಾಜ್ಯೇತ್ಸವ ಸಂದರ್ಭದಲ್ಲಿ ಕರ್ನಾಟಕ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿ ಪೊಲೀಸ್ ಪದಕ ಹಾಗೂ 19 ಮಂದಿಗೆ ಪೊಲೀಸ್ ಪದಕದ ಗೌರವಕ್ಕೆ ಭಾಜನರಾಗಿದ್ದಾರೆ.