ನವದೆಹಲಿ, ಜ 26 (DaijiworldNews/HR): ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪದ್ಮಭೂಷಣ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ನನಗೆ ಏನೂ ಹೇಳಿಲ್ಲ. ಹಾಗಾಗಿ ಅವರು ನನಗೆ ಪದ್ಮಭೂಷಣ ನೀಡುವುದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಿದ್ದು, ಪದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುವುದು ಎಂದು ತಿಳಿದಿದ್ದು, ಈ ಬಾರಿ ಒಟ್ಟು 17 ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗುವುದು.