ಬೆಂಗಳೂರು, ಜ 26 (DaijiworldNews/HR): ಇಂದು ದೇಶಾದ್ಯಂತ 73 ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
5 ವಾದ್ಯವೃಂದ, ಬಿಎಸ್ಎಫ್, ಅಗ್ನಿಶಾಮಕ ದಳ, ಮಹಿಳಾ ಪೊಲೀಸ್, ಅಶ್ವದಳ ಸೇರಿದಂತೆ 16 ತಂಡಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಿವೆ.
ಇನ್ನು ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಬಾರಿ ಸರಳ ಗಣರಾಜ್ಯೋತ್ಸವ ಹಮ್ಮಿಕೊಂಡಿದ್ದು, ಕೇವಲ 200 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.