ಬೆಂಗಳೂರು, ಜ 26 (DaijiworldNews/HR): ಕಾಂಗ್ರೆಸ್ನ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಇದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ನ ಅನ್ಯಾಯ, ಗುಂಪುಗಾರಿಕೆಯಿಂದ ಬೇಸತ್ತು ಬಿಜೆಪಿಯತ್ತ ಅನೇಕರು ಮುಖ ಮಾಡಿದ್ದಾರೆ. ನಾನು ಸತ್ಯವನ್ನೇ ಹೇಳುತ್ತೇನೆ" ಎಂದರು.
ಇನ್ನು ನನ್ನ ಜೊತೆ ಅನೇಕ ಶಾಸಕರು ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಪಕ್ಷದಲ್ಲಿಯೂ ಈ ಬಗ್ಗೆ ಚರ್ಚೆಯೂ ಆಗಿದೆ. ಅವರ ರಾಜಕೀಯ ಭವಿಷ್ಯದ ಹಿತದೃಷ್ಟಿಯಿಂದ ಹೆಸರು ಹೇಳುವುದಿಲ್ಲ. ಆದರೆ ನಮ್ಮ ಜೊತೆ ಸಂಪರ್ಕದಲ್ಲಿರುವುದು ಸತ್ಯ" ಎಂದು ಹೇಳಿದ್ದಾರೆ.