ಬೆಂಗಳೂರು, ಜ 27 (DaijiworldNews/HR): ಬಿಜೆಪಿ, ಜೆಡಿಎಸ್ನಿಂದ ಕಾಂಗ್ರೆಸ್ಗೆ ಬರಲು ಇಚ್ಛಿಸಿರುವ ಶಾಸಕರು ಹಾಗೂ ಸಚಿವರ ಬಳಿ ನಾನಾಗಿಯೇ ಮಾತನಾಡುವುದಿಲ್ಲ. ಅವರಾಗಿ ಬಂದರೆ ಮಾತನಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೌದು ಹೇಳಿದ್ದೆ. ಆ ಮಾತಿಗೆ ಈಗಲೂ ಬದ್ಧ.ಅವರನ್ನು ಸೇರಿಸಿಕೊಳ್ಳುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು.
ಇನ್ನು ಕಾಂಗ್ರೆಸ್ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬರುವವರಿಗೆ ಸ್ವಾಗತವಿದೆ. ಯಾವುದೇ ಷರತ್ತು ಇಲ್ಲದೆ ಬಂದರೆ ಸೇರಿಸಿಕೊಳ್ಳಲಾಗುವುದು ಎಂದಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದುಕೊಂಡಿದ್ದೇನೆ. ಬಾದಾಮಿ, ವರುಣಾ ಸೇರಿ ಹತ್ತು ಕ್ಷೇತ್ರಗಳಿಂದ ಸ್ಪರ್ಧೆಗೆ ಆಹ್ವಾನ ಇದೆ. ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ತೀರ್ಮಾನಿಸಿಲ್ಲ ಎಂದು ಹೇಳಿದ್ದಾರೆ.