ಹುಬ್ಬಳ್ಳಿ, ಜ 27 (DaijiworldNews/HR): ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಬೇಕು ಇದರಿಂದ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ" ಎಂದರು.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ವರಿಷ್ಠರ ನಿರ್ದೇಶನದಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದಾರೆ. ಇದಕ್ಕೆ ಯಾವ ರೀತಿ ಸ್ಪಂದನೆ ವ್ಯಕ್ತವಾಗುತ್ತದೆ ಎನ್ನುವುದನ್ನು ಸ್ವಲ್ಪ ದಿನ ಕಾದು ನೋಡಿ ನನ್ನ ಅಭಿಪ್ರಾಯವನ್ನು ಪಕ್ಷದ ನಾಯಕರಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.