ನವದೆಹಲಿ, ಜ 27 (DaijiworldNews/HR): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,86,384 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಿನದ ಪಾಸಿಟಿವಿಟಿ ರೇಟ್ ಶೇ.19.59ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,86,384 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 573 ಜನ ಮಹಾಮಾರಿಗೆ ಬಲಿಯಾಗಿದ್ದು, ಈವರೆಗೆ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 491700ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2202472 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 306357 ಮಂದಿ ಗುಣಮುಖರಾಗಿದ್ದು, ಈವರೆಗೆ 37677328 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬುಧವಾರ 22,35,267 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,63,84,39,207 ಜನರಿಗೆ ಲಸಿಕೆ ಹಾಕಲಾಗಿದೆ.